ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ

ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ

ಕರ್ನಾಟಕ ಸರ್ಕಾರ

ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ

ಮಾನ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರು

×
ಅಭಿಪ್ರಾಯ
2022-23 ಬಜೆಟ್ ಪ್ರಕಟಣೆಗಳು

ಕಂಡಿಕೆ

ಸಂಖ್ಯೆ

ಆಯವ್ಯಯ ಘೋಷಣೆಗಳು

202

ಯುವಕರು ಮತ್ತು ಮಹಿಳೆಯರಿಗೆ, ವಿಶೇಷವಾಗಿ ದುರ್ಬಲವರ್ಗದವರಿಗೆ ಉದ್ಯೋಗ ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಗ್ರಾಮೀಣ ಜೀವನೋಪಾಯ ಅಭಿಯಾನವು ಒಂದು ದಶಕವನ್ನು ಪೂರ್ಣಗೊಳಿಸುವ ಹಿನ್ನಲೆಯಲ್ಲಿ, 2022-23ನೇ ವರ್ಷವನ್ನು “ಜೀವನೋಪಾಯ ವರ್ಷ” ಎಂದು ಆಚರಿಸಲಾಗುವುದು. ಈ ಅಭಿಯಾನದಡಿ ಒಟ್ಟು 1,100 ಕೋಟಿ ರೂ.ಗಳ ಕ್ರಿಯಾಯೋಜನೆಯನ್ನು ಪ್ರಸ್ತಾಪಿಸಲಾಗಿದೆ.

204ಅ

ಆಯ್ದ ಸ್ವ-ಸಹಾಯ ಸಂಘಗಳಿಗೆ ಅವುಗಳು ಆರ್ಥಿಕ ಸ್ವಾತಂತ್ರ್ಯ ಗಳಿಸಲು ಸಾಧ್ಯವಾಗಲು ಹಾಗೂ ತಮ್ಮ ಉದ್ಯಮಶೀಲತೆಯನ್ನು ಮತ್ತಷ್ಟು ವೃದ್ಧಿಪಡಿಸಿಕೊಳ್ಳುವುದಕ್ಕಾಗಿ ತಲಾ 1.5 ಲಕ್ಷ ರೂ.ಗಳ ನೆರವನ್ನು ಒದಗಿಸಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 500 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆಯನ್ನು ನೀಡಲು 50 ಕೋಟಿ ರೂ.ಗಳ ಮೊತ್ತದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಇದರಿಂದ ಸುಮಾರು 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ.

204 ಆ

ಮಹಿಳಾ ಸ್ವ-ಸಹಾಯ ಸಂಘಗಳು ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯಗಳನ್ನು ಪಡೆಯುವುದು ಕಷ್ಟಸಾಧ್ಯವಾಗಿರುತ್ತದೆ. ಇದನ್ನು ಮನಗಂಡು ನಮ್ಮ ಸರ್ಕಾರವು ಸಾರ್ವಜನಿಕ ವಲಯದ ಬ್ಯಾಂಕುಗಳ ಸಹಯೋಗದೊಂದಿಗೆ ಏಕಗವಾಕ್ಷಿ ಸಾಲ ಸೌಲಭ್ಯವನ್ನು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮುಖೇನ ಲಭ್ಯ ಪಡಿಸಲಾಗುವುದು. ಇದಕ್ಕೆ ಸಾರ್ವಜನಿಕ ವಲಯದ ಒಂದು ಬ್ಯಾಂಕನ್ನು Anchor Bank ಎಂದು ಗುರುತಿಸಲಾಗುವುದು.

204ಇ

ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್‌, ಮೌಲ್ಯವರ್ಧನೆ, ಆಕರ್ಷಣೀಯ ಪ್ಯಾಕಿಂಗ್‌ ವ್ಯವಸ್ಥೆಯನ್ನು ಒದಗಿಸಿ ಬೃಹತ್‌ ಮಟ್ಟದಲ್ಲಿ ಮಾರುಕಟ್ಟೆ ವೇದಿಕೆಗಳ ಅವಕಾಶಕ್ಕಾಗಿ “ಅಸ್ಮಿತೆ” ಹೆಸರಿನಡಿ ಎಲ್ಲಾ ಉತ್ಪನ್ನಗಳಿಗೆ ಮಾರಾಟ ವ್ಯವಸ್ಥೆ ಅಭಿವೃದ್ಧಿ ಪಡಿಸಲಾಗುವುದು. ಈ ಉದ್ದೇಶಕ್ಕಾಗಿ ಹೋಬಳಿ/ಜಿಲ್ಲೆ/ರಾಜ್ಯ ಮಟ್ಟದಲ್ಲಿ ಮಾರಾಟ ಮೇಳಗಳನ್ನು ನಡೆಸಲಾಗುವುದು. ಸರ್ಕಾರದ ವಿವಿಧ ಇಲಾಖೆಗಳಡಿಯಲ್ಲಿ ಮಾಡಲಾಗುವ ಸಂಗ್ರಹಣೆಯಲ್ಲಿ ಸ್ವ-ಸಹಾಯ ಗುಂಪುಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳಿಗೆ ಆದ್ಯತೆ ನೀಡಲಾಗುವುದು.

204ಈ

ಸ್ತ್ರೀಶಕ್ತಿ ಒಕ್ಕೂಟದ ಸದಸ್ಯರು ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಪ್ರಸ್ತುತ 200 ವರ್ಕ್‌ ಶೆಡ್‌ಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, 2022-23ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 750 ವರ್ಕ್‌ ಶೆಡ್‌ಗಳನ್ನು ನಿರ್ಮಿಸಲಾಗುವುದು.

204ಉ

ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಉತ್ತೇಜಿಸಲು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಸರ್ಕಾರಿ ಕಛೇರಿ ಸಂಕೀರ್ಣದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳು ನಡೆಸುವ ಕ್ಯಾಂಟೀನ್‌ ಮತ್ತು ಮಾರಾಟ ಮಳಿಗೆಯನ್ನು ಸ್ಥಾಪಿಸಲಾಗುವುದು.

204ಊ

ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ  ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ, ಇಳಕಲ್-ಗುಳೇದಗುಡ್ಡ, ಬೆಳಗಾವಿ-ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮೂರುಗಳಲ್ಲಿ ಸೀರೆ ಮೈಕ್ರೋಕ್ಲಸ್ಟರ್‌ ಅನ್ನು ಅಭಿವೃದ್ಧಿ ಪಡಿಸಲಾಗುವುದು.